ಹಾಸನ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತವುಂಟಾಗಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಗುಡ್ಡ ಕುಸಿದಿದ್ದು, ಶಿರಾಡಿಘಾಟ್ ನ ರಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತಗೊಂಡಿದೆ. ಕಿಲೋಮೀಟರ್ ಗಟ್ಟಲೇ ವಾಹನಗಳು ನಿಂತಿದ್ದು, ಜನರು ಪರದಾಟ ನಡೆಸಿದ್ದಾರೆ.
ಅಧಿಕಾರಿಗಳು, ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಮಣ್ಣು ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ. ಇದೇ ರೀತಿ ಮಳೆ ಮುಂದುವರೆದರೆ ಶಿರಾಡಿಘಾಟ್ ನ ಇನ್ನೂ ಹಲವೆಡೆ ಗುಡ್ಡ ಕುಸಿಯುವ ಭೀತಿ ಎದುರಾಗಿದೆ.
ಜುಲೈ 18ರಂದು ಸಕಲೇಶಪುರದ ದೊಡ್ಡತಪ್ಲು ಬಳಿ ಶಿರಾಢಿಘಾಟ್ ನಲ್ಲಿ ಕಾರಿನ ಮೇಲೆ ಗುಡ್ಡ ಕುಸಿದು ಬಿದ್ದಿತ್ತು. ಅದೃಷ್ಟವಶಾತ್ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದರು.