
ಹಾಸನ: ಶಿರಾಡಿ ಘಾಟ್ ನಲ್ಲಿ ರಾತ್ರಿ ವೇಳೆ ಭಾರಿ ವಾಹನ ಸಂಚಾರ ನಿಷೇಧಿಸಿ ಹಾಸನ ಜಿಲ್ಲಾಧಿಕಾರಿ ಗಿರೀಶ್ ಆದೇಶ ಹೊರಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂಕುಸಿತವಾದ ಹಿನ್ನೆಲೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಭಾರಿ ವಾಹನಗಳ ಸಂಚಾರಕ್ಕೆ ತಡೆ ನೀಡಲಾಗಿದೆ. ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ರವರೆಗೆ ಏಕಮುಖವಾಗಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಲಹೆಯಂತೆ ರಾತ್ರಿ ವೇಳೆ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ.