ಹಾಸನ: ಶಿರಾಡಿಘಾಟ್ ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಬಿದ್ದಿದ್ದು, ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆತಂಕ ಸೃಷ್ಟಿಯಾಗಿದೆ.
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು, ಗ್ಯಾಸ್ ಸೋರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.
ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ವಾಹನಗಳನ್ನು ಬದಲಿ ಮಾರ್ಗದಲ್ಲಿ ತೆರಳುವಂತೆ ಪೊಲೀಸರು ಸೂಚಿಸುತ್ತಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದಾರೆ.