ಕಾರವಾರ: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 13 ದಿನಗಳಿಂದ ನಡೆಸುತ್ತಿದ್ದ ಶೋಧ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಸಂಭವಿಸಿತ್ತು. ಘಟನೆಯಲ್ಲಿ 12 ಜನರು ನಾಪತ್ತೆಯಾಗಿದ್ದು, ಅವರಲ್ಲಿ 8 ಜನರ ಮೃತದೇಹ ಪತ್ತೆಯಾಗಿದೆ. ಆದರೆ ಉಳಿದ ಮೂವರ ಸುಳಿವು ಸಿಗುತ್ತಿಲ್ಲ.
ಮೂವರ ಪತ್ತೆಗಾಗಿ ಹಾಗೂ ಕೇರಳ ಮೂಲದ ಲಾರಿ ಪತ್ತೆಗಾಗಿ ಗುಡ್ಡ ಕುಸಿತದ ಅವಶೇಷಗಳಡಿ ಹಾಗೂ ಗಂಗಾವಳಿ ನದಿಯಲ್ಲಿ ಕಳೆದ 13 ದಿನಗಳಿಂದ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಆದಾಗ್ಯೂ ಮೂವರ ಪತ್ತೆಯಾಗಿಲ್ಲ. ನದಿಯಲ್ಲಿ ಮಣ್ಣು, ಕಲ್ಲುಗಳ ರಾಶಿ ಬಿಟ್ಟು ಬೇರೇನೂ ಸಿಗದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಶೋಧ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಮುಂದಿನ ಶೋಧ ಕಾರ್ಯಾಚರಣೆ ಬಗ್ಗೆ ಹೆಚ್ಚಿನ ಸಿದ್ಧತೆ ನಡೆಸಿ ಕೈಗೊಳ್ಳಲು ನಿರ್ಧರಿಸಲಾಗಿದೆ.