
ಕಾರವಾರ: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನ ಶವ ಪತ್ತೆಯಾಗಿದೆ. ಈ ಮೂಲಕ ಘಟನೆಯಲ್ಲಿ ಈವರೆಗೆ 6 ಜನರ ಮೃತದೇಹ ಪತ್ತೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಮಂಜಗುಣಿ ಬಳಿ ಚಾಲಕನ ಶವ ಪತ್ತೆಯಾಗಿದೆ. ತಮಿಳುನಾಡು ಮೂಲದ ಚಾಲಕ ಚಿನ್ನ (55) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆಯಷ್ಟೇ ಓರ್ವ ಬಾಲಕಿಯ ಶವ ಪತ್ತೆಯಾಗಿತ್ತು. ಇದೀಗ ಚಾಲಕನ ಮೃತದೇಹ ಪತ್ತೆಯಾಗಿದೆ.
ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಸಂಭವಿಸಿದ್ದು, 9 ಜನರು ಜನರು ಕಣ್ಮರೆಯಾಗಿದ್ದರು. ಅವರಲ್ಲಿ ಈವರೆಗೆ 7 ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, 6 ಶವಗಳು ಪತ್ತೆಯಾಗಿವೆ. ಮೂರು ದಿನಗಳಿಂದ ಮಣ್ಣು ತೆರವು ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತಿದೆ.
ಇನ್ನು ಗುಡ್ಡ ಕುಸಿತದ ರಭಸಕ್ಕೆ ಗ್ಯಾಸ್ ಟ್ಯಾಂಕರ್ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗಿದ್ದು, ಇನ್ನಷ್ಟು ಆತಂಕ ಸೃಷ್ಟಿಸಿದೆ.