ಕಾರವಾರ: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ್ದ ಗುಡ್ಡ ಕುಸಿತ ಘಟನೆಯಲ್ಲಿ 10 ಜನರು ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಗುಡ್ಡ ಕುಸಿತದ ವೇಳೆ ಗಂಗಾವಳಿ ನದಿಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದ ಗ್ಯಾಸ್ ಟ್ಯಾಂಕರ್ ನ್ನು ಮೇಲಕೆತ್ತಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಜುಲೈ 16ರಂದು ಗುಡ್ಡ ಕುಸಿತ ಸಂಭವಿಸಿ ರಸ್ತೆ ಪಕ್ಕದಲಿದ್ದ ಟೀ ಅಂಗಡಿ ನೆಲಸಮವಾಗಿತ್ತು. ಗುಡ್ಡ ಕುಸಿತದ ಹೊಡೆತಕ್ಕೆ ರಸ್ತೆಯಲ್ಲಿ ಹೊಗುತ್ತಿದ್ದ ಎರಡು ಕಾರುಗಳು, ಒಂದು ಗ್ಯಾಸ್ ಟ್ಯಾಂಕರ್ ಗಂಗಾವಳಿ ನದಿಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿತ್ತು. ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ.
ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗಿದ್ದ ಗ್ಯಾಸ್ ಟ್ಯಾಂಕರ್ ನ್ನು ಸತತ ಮೂರು ದಿನಗಳ ನಿರಂತರ ಕಾರ್ಯಾಚರಣೆ ಮೂಲಕ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ, ಎನ್ ಡಿ ಆರ್ ಎಫ್ ತಂಡ ನದಿಯಿಂದ ಮೇಲಕ್ಕೆತ್ತಿದೆ. ಗ್ಯಾಸ್ ಟ್ಯಾಂಕರ್ ನಲ್ಲಿ 1,800ಕೆಜಿ ಗ್ಯಾಸ್ ಇದ್ದು, ಗ್ಯಾಸ್ ನ್ನು ಸಂಪೂರ್ನವಾಗಿ ನದಿಗೆ ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ 20 ಹಳ್ಲಿಗಳಲ್ಲಿ ವಿದ್ಯುತ್ಸ್ಥಗಿಅಗೊಳಿಸಲಾಗಿತ್ತು. ಮನೆಯಲ್ಲಿ ಯಾರೂ ಅಡುಗೆ ಮಾಡದಂತೆ, ದೀಪ ಉರಿಸದಂತೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿತ್ತು. 100 ಸಿಬ್ಬಂದಿಗಳ ನಿರಂತರ ಕಾರ್ಯಾಚರಣೆ ಮೂಲಕ ಗ್ಯಾಸ್ ಟ್ಯಾಂಕರ್ ಮೇಲಕೆತ್ತಲಾಗಿದೆ.