ಬೆಳಗಾವಿ: ಶಿವಸೇನೆ ಹಾಗೂ ಎಂಇಎಸ್ ಪುಂಡರ ಹಾವಳಿ ರಾಜ್ಯದಲ್ಲಿ ಎಲ್ಲೆ ಮೀರುತ್ತಿದೆ. ಬೆಳಗಾವಿಯಲ್ಲಿ ಮತ್ತೊಮ್ಮೆ ಕನ್ನಡ ಧ್ವಜಕ್ಕೆ ಬೆಂಕಿಯಿಟ್ಟು, ಸಿಎಂ ಬಸವರಾಜ ಬೊಮ್ಮಾಯಿ ಅವರ ಅಣಕು ಶವಯಾತ್ರೆ ಮಾಡಿದ್ದಾರೆ.
ಬೆಳಗಾವಿ ಹಾಗೂ ಮಹಾರಾಷ್ಟ್ರ ಗಡಿಯಲ್ಲಿ ಶಿವಸೇನೆ ಈ ರೀತಿ ಉದ್ಧಟತನ ಮೆರೆದಿದೆ. ಶಿವಸೇನೆ ಮುಖಂಡ ಚಂದ್ರಕಾಂತ ಮೈಗುರೆ ನೇತೃತ್ವದಲ್ಲಿ ಈ ಪುಂಡಾಟಿಕೆ ನಡೆದಿದೆ.
ಮೈಕೋ ಲೇಔಟ್ ಪೊಲೀಸರ ಕಾರ್ಯಾಚರಣೆ..! ಐದು ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ
ರಾಜ್ಯದಲ್ಲಿ ಎಂಇಎಸ್ ಹಾಗೂ ಶಿವಸೇನೆ ಪುಂಡಾಟಿಕೆ ಮಟ್ಟ ಹಾಕಲು ಸರ್ಕಾರ ಪ್ರಯತ್ನಿಸುತ್ತಿರುವ ಮಧ್ಯೆಯೇ ಅವರ ವಿಕೃತ ಕಾರ್ಯಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಇದಕ್ಕೆ ಕಡಿವಾಣ ಹಾಕಬೇಕೆಂದು ಸರ್ಕಾರಕ್ಕೆ ಒತ್ತಾಯಿಸುವುದಕ್ಕಾಗಿ ಈಗಾಗಲೇ ಕನ್ನಡಪರ ಸಂಘಟನೆಗಳು ಡಿ.31ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಇದರ ಬೆನ್ನಲ್ಲಿಯೇ ಈಗ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಸಿಎಂ ಪ್ರತಿಕೃತಿ ದಹಿಸಿದ್ದಾರೆ.