ಬೆಳಗಾವಿ: ಬೆಳಗಾವಿ ಗಡಿಯಲ್ಲಿ ಶಿವಸೇನೆ ಕಾರ್ಯಕರ್ತರು ಹೈಡ್ರಾಮಾ ನಡೆಸಿದ್ದಾರೆ. ಮಹಾರಾಷ್ಟ್ರ ಸಚಿವರ ವಿರುದ್ಧವೇ ಶಿವಸೇನೆ(ಉದ್ಧವ್ ಠಾಕ್ರೆ ಬಣ) ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ನಗರಕ್ಕೆ ತೆರಳುವುದಾಗಿ ಮಹಾರಾಷ್ಟ್ರ ಸಚಿವರು ಹೇಳಿದ್ದರು. ಆದರೆ, ಬೆಳಗಾವಿಗೆ ಹೋಗದಿರುವುದಕ್ಕೆ ಮಹಾರಾಷ್ಟ್ರ ಸಚಿವರ ವಿರುದ್ಧವೇ ಶಿವಸೇನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಚಂದ್ರಕಾಂತ ಪಾಟೀಲ್, ಶಂಭುರಾಜ ದೇಸಾಯಿ ವಿರುದ್ಧ ಕೊಗನೊಳ್ಳಿ ಚೆಕ್ ಪೋಸ್ಟ್ ಸಮೀಪ ಪ್ರತಿಭಟನೆ ನಡೆಸಿದ್ದಾರೆ.
ಇಂದು ಬೆಳಗಾವಿಗೆ ಮಹಾರಾಷ್ಟ್ರ ಸಚಿವರಾದ ಚಂದ್ರಕಾಂತ ಪಾಟೀಲ್ ಮತ್ತು ಶಂಭುರಾಜ ದೇಸಾಯಿ ಭೇಟಿ ನೀಡಬೇಕಿತ್ತು, ಆದರೆ ಕರ್ನಾಟಕ ಸರ್ಕಾರ ಅವಕಾಶ ಕೊಟ್ಟಿಲ್ಲ.
ಚಂದ್ರಕಾಂತ ಪಾಟೀಲ ಹಾಗೂ ದೇಸಾಯಿ ವಿರುದ್ಧ ಶಿವಸೇನೆ ಕಾರ್ಯಕರ್ತರು ಘೋಷಣೆ ಕೂಗಿದ್ದು, ಬೆಳಗಾವಿ ಗಡಿ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಬೆಳಗಾವಿ ಕಾರವಾರ ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಕೂಗಿದ್ದಾರೆ. 30 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಕಾಗಲ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.