ತುಮಕೂರು: ನಡೆದಾಡುವ ದೇವರು ತ್ರಿವಿಧ ದಾಸೋಹಿ, ಡಾ. ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವ ಇಂದು ನಡೆಯಲಿದೆ.
2019ರ ಜನವರಿಯಲ್ಲಿ ಶಿವಕುಮಾರ ಶ್ರೀಗಳು ಲಿಂಗೈಕ್ಯರಾಗಿದ್ದರು. ಕೊರೋನಾ ಕಾರಣದಿಂದ ಎರಡು ವರ್ಷದ ನಂತರ ಶ್ರೀಗಳ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.
ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ. ನಾಲ್ಕು ಲಕ್ಷಕ್ಕೂ ಅಧಿಕ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಭಕ್ತರಿಗೆ ಶ್ರೀಗಳ ಗದ್ದುಗೆ ದರ್ಶನ, ಊಟೋಪಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.