alex Certify ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ 115 ನೇ ಜಯಂತ್ಯುತ್ಸವ ಸಂಭ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ 115 ನೇ ಜಯಂತ್ಯುತ್ಸವ ಸಂಭ್ರಮ

ತುಮಕೂರು: ನಡೆದಾಡುವ ದೇವರು ತ್ರಿವಿಧ ದಾಸೋಹಿ, ಡಾ. ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವ ಇಂದು ನಡೆಯಲಿದೆ.

2019ರ ಜನವರಿಯಲ್ಲಿ ಶಿವಕುಮಾರ ಶ್ರೀಗಳು ಲಿಂಗೈಕ್ಯರಾಗಿದ್ದರು. ಕೊರೋನಾ ಕಾರಣದಿಂದ ಎರಡು ವರ್ಷದ ನಂತರ ಶ್ರೀಗಳ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ. ನಾಲ್ಕು ಲಕ್ಷಕ್ಕೂ ಅಧಿಕ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಭಕ್ತರಿಗೆ ಶ್ರೀಗಳ ಗದ್ದುಗೆ ದರ್ಶನ, ಊಟೋಪಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...