alex Certify ಮಂತ್ರಿ ಮಾಡ್ತೀವಿ, ನಿಗಮ ಮಂಡಳಿನೂ ಕೊಡ್ತೀವಿ ಎಂದು ಸಿಎಂ, ಡಿಸಿಎಂ ಹೇಳಿದ್ದಾರೆ: ಶಾಸಕ ಶಿವಲಿಂಗೇಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂತ್ರಿ ಮಾಡ್ತೀವಿ, ನಿಗಮ ಮಂಡಳಿನೂ ಕೊಡ್ತೀವಿ ಎಂದು ಸಿಎಂ, ಡಿಸಿಎಂ ಹೇಳಿದ್ದಾರೆ: ಶಾಸಕ ಶಿವಲಿಂಗೇಗೌಡ

ಹಾಸನ: ಸಚಿವ ಸ್ಥಾನ, ನಿಗಮ -ಮಂಡಳಿಯ ಅಧ್ಯಕ್ಷ ಸ್ಥಾನದ ನಿರೀಕ್ಷೆಯಲ್ಲಿದ್ದೇನೆ ಎಂದು ಅರಸೀಕೆರೆಯಲ್ಲಿ ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ.

ಈ ವಾರದಲ್ಲಿ ನಿಗಮ ಮಂಡಳಿ ನೇಮಕಾತಿ ಆಗಬಹುದು ನೋಡೋಣ. ಮಾತುಕೊಟ್ಟು ನನ್ನನ್ನು ಕಾಂಗ್ರೆಸ್ ಗೆ ಕರೆದುಕೊಂಡು ಬಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅಣತಿಯಂತೆ ನಡೆಯುತ್ತೇನೆ. ಮಂತ್ರಿ ಮಾಡ್ತೀನಿ, ನಿಗಮ -ಮಂಡಳಿನೂ ಕೊಡ್ತೀವಿ ಎಂದು ಹೇಳಿದ್ದಾರೆ ಎಂದರು.

ಎರಡೂವರೆ ವರ್ಷಕ್ಕೆ ನಿನ್ನನ್ನು ಮಂತ್ರಿ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ಅದಕ್ಕೆ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಮಾತಿಗೆ ನಾನು ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆ ಬಳಿಕ ಸರ್ಕಾರ ಪತನ ಎಂಬ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ಪತನ ಎಂಬುದು ಬಿಜೆಪಿಯವರ ಭ್ರಮೆ. ಎಲ್ಲೋ ಹಗಲುಗನಸು ಬಿದ್ದಿರಬೇಕು. ಸರ್ಕಾರ ಬೀಳುತ್ತೆ ಎಂಬುದು ಬಿಜೆಪಿಯವರ ಕನಸು ಅಷ್ಟೇ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...