alex Certify ಕಾಂಗ್ರೆಸ್ ಸೇರಲು ಸಜ್ಜಾದ ಜೆಡಿಎಸ್ ಶಾಸಕ ಶಿವಲಿಂಗೇಗೌಡರಿಗೆ ದಳಪತಿಗಳ ಬಿಗ್ ಶಾಕ್: ಬೃಹತ್ ಶಕ್ತಿ ಪ್ರದರ್ಶನ, ನಾಳೆಯೇ ಅಭ್ಯರ್ಥಿ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಸೇರಲು ಸಜ್ಜಾದ ಜೆಡಿಎಸ್ ಶಾಸಕ ಶಿವಲಿಂಗೇಗೌಡರಿಗೆ ದಳಪತಿಗಳ ಬಿಗ್ ಶಾಕ್: ಬೃಹತ್ ಶಕ್ತಿ ಪ್ರದರ್ಶನ, ನಾಳೆಯೇ ಅಭ್ಯರ್ಥಿ ಘೋಷಣೆ

ಹಾಸನ: ಕಾಂಗ್ರೆಸ್ ಸೇರಲು ಸಜ್ಜಾಗಿರುವ ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರಿಗೆ ಸೆಡ್ಡು ಹೊಡೆಯಲು ಜೆಡಿಎಸ್ ನಾಯಕರು ಸಜ್ಜಾಗಿದ್ದಾರೆ.

ನಾಳೆ ಅರಸೀಕೆರೆಯಲ್ಲಿ ಬೃಹತ್ ಸಮಾವೇಶ ನಡೆಸಲು ಜೆಡಿಎಸ್ ಪಕ್ಷ ಭರ್ಜರಿ ತಯಾರಿ ಮಾಡಿಕೊಂಡಿದೆ. ಶಾಸಕ ಶಿವಲಿಂಗೇಗೌಡರ ವಿರುದ್ಧ ಶಕ್ತಿ ಪ್ರದರ್ಶನಕ್ಕೆ ದಳಪತಿಗಳು ಸಿದ್ಧತೆ ಕೈಗೊಂಡಿದ್ದಾರೆ.

ನಾಳೆ ಅರಸೀಕೆರೆ ಜೆಡಿಎಸ್ ಅಭ್ಯರ್ಥಿಯನ್ನು ಹೆಚ್.ಡಿ. ಕುಮಾರಸ್ವಾಮಿ ಘೋಷಣೆ ಮಾಡಲಿದ್ದಾರೆ/ ಅಭ್ಯರ್ಥಿಯಾಗಿ ಬಾಣಾವರ ಅಶೋಕ್ ಅವರ ಹೆಸರನ್ನು ಘೋಷಿಸುವ ಸಾಧ್ಯತೆ ಇದೆ.

ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಣಾವರ ಅಶೋಕ್ ಅವರ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಕುಮಾರಸ್ವಾಮಿ ನಾಳೆ ಹೊಸ ಅಭ್ಯರ್ಥಿ ಹೆಸರು ಘೋಷಣೆ ಮಾಡುವುದಾಗಿ ಹೇಳಿದ್ದಾರೆ. ಅಭ್ಯರ್ಥಿ ಘೋಷಣೆ ಬಳಿಕ ಮುಂದಿನ ನಿರ್ಧಾರವೆಂದು ಶಿವಲಿಂಗೇಗೌಡರು ಹೇಳಿದ್ದಾರೆ. 25000 ಕಾರ್ಯಕರ್ತರನ್ನು ಸೇರಿಸಿ ಸಮಾವೇಶ ನಡೆಸಲು ಜೆಡಿಎಸ್ ನಿಂದ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಾಳಿನ ಸಮಾವೇಶ ಭಾರಿ ಕುತೂಹಲ ಮೂಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...