
ಶಿವಮೊಗ್ಗ: ಶಿವಮೊಗ್ಗ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಈಶ್ವರಪ್ಪ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಕೇಸು ದಾಖಲಿಸಲಾಗಿದೆ. ಅವರು ಶಿವಮೊಗ್ಗದ ಗೋಪಾಳದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಪ್ರಚಾರ ನಡೆಸಿದ್ದಾರೆ. ಧಾರ್ಮಿಕ ಕೇಂದ್ರದಲ್ಲಿ ಪ್ರಚಾರ ಮಾಡಿದ್ದಕ್ಕೆ ತುಂಗಾ ನಗರ ಠಾಣೆಗೆ ಚುನಾವಣಾಧಿಕಾರಿ ದೂರು ನೀಡಿದ್ದಾರೆ. ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
ಈ ಹಿಂದೆ ಶಿಕಾರಿಪುರದಲ್ಲಿ ಅನುಮತಿಗಿಂತ ಹೆಚ್ಚಿನ ವಾಹನ ಬಳಸಿ ಬೈಕ್ ರ್ಯಾಲಿ, ಧಾರ್ಮಿಕ ಚಿಹ್ನೆ ಇರುವ ಬಾವುಟ ಬಳಸಿದ ಕಾರಣಕ್ಕೆ ಈಶ್ವರಪ್ಪ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲಾಗಿತ್ತು.