
ಶಿವಮೊಗ್ಗ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಯೊಬ್ಬ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ.
ಸಂಜಯ್ (31) ಮೃತ ಯುವಕ. ಕಳೆದ ನಾಲ್ಕು ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದ. ಪ್ರಿಯತಮೆ ಕೈಕೊಟ್ಟ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಸಂಜಯ್ ಶಿವಮೊಗ್ಗದ ಕಲ್ಲಾಪುರ ಗ್ರಾಮದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಸಂಜಯ್ ನನ್ನು ಮೆಗ್ಗಾನ್ ಆಸ್ಪತ್ರೆಗೆ ದಖಲಿಸಲಾಗಿತ್ತು.
ಚಿಕಿತ್ಸೆ ಫಲಿಸದೇ ಇಂದು ಆಸ್ಪತ್ರೆಯಲ್ಲಿಯೇ ಸಂಜಯ್ ಕೊನೆಯುಸಿರೆಳೆದಿದ್ದಾನೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಶಿವಮೊಗ್ಗ ಗ್ರಾಮಾಂತರ ಪೊಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.