ಶಿವಮೊಗ್ಗ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದ ಕ್ಲಾರ್ಕ್ ಪೇಟೆಯಲ್ಲಿ ನಡೆದಿದೆ.
ವಿಷ ಸೇವಿಸಿ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಭುವನೇಶ್ವರಿ, ಮೋಹನ್, ದರ್ಶನ್ ಆತ್ಮಹತ್ಯೆಗೆ ಶರಣಾದವರು. ಎರಡು ದಿನಗಳ ಹಿಂದೆಯೇ ಮೂವರು ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಇಂದು ಮನೆಯ ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.