alex Certify ಲಾರಿ – ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾರಿ – ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ- ಭದ್ರಾವತಿ ಹೆದ್ದಾರಿ ಹೆದ್ದಾರಿಯಲ್ಲಿ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಮತ್ತೊಬ್ಬರು ಗಾಯಗೊಂಡಿದ್ದು, ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರಾವತಿ ಕಡೆಗೆ ತೆರಳುತ್ತಿದ್ದ ಲಾರಿ ಎದುರಿನಿಂದ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಲಾರಿ ಡಿಕ್ಕಿಯಾದ ರಭಸಕ್ಕೆ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿಗೆ ಡಿಕ್ಕಿ ಹೊಡೆಯುವ ಮೊದಲೇ ಈ ಬೈಕ್ ಮತ್ತೊಂದು ಬೈಕ್ ಗೆ ಡಿಕ್ಕಿ ಹೊಡೆದಿತ್ತು ಎನ್ನಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...