
ಶಿವಮೊಗ್ಗ: ಲಾರಿ, ಕಾರ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲ್ಲೂಕಿನ ಕಲ್ಲಾಪುರ ಬಳಿ ನಡೆದಿದೆ.
ವಿವೇಕ್(21), ಕಾರ್ತಿಕ್(21), ಮೋಹನ್(21) ಮೃತಪಟ್ಟವರು ಎಂದು ಹೇಳಲಾಗಿದೆ. ಮೃತ ಯುವಕರು ದಾವಣಗೆರೆ ಮೂಲದ ನಿವಾಸಿಗಳಾಗಿದ್ದಾರೆ. ಅಪಘಾತದಲ್ಲಿ ರುದ್ರೇಶ್ ಎಂಬಾತ ಗಾಯಗೊಂಡಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಾರಿ ಚಾಲಕನನ್ನು ಶಿವಮೊಗ್ಗ ಗ್ರಾಮಾಂತರ ಠಾಣೆ ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.