ಶಿವಮೊಗ್ಗ: ಫೆಬ್ರವರಿ 27 ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ದಿನಾಂಕ ನಿಗದಿಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಏರ್ಪೋರ್ಟ್ ಕಾಮಗಾರಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದ್ದು, ಬೆಂಗಳೂರು ನಂತರ ಶಿವಮೊಗ್ಗ ಏರ್ಪೋರ್ಟ್ ದೊಡ್ಡ ೇರ್ ಪೋರ್ಟ್ ಆಗಲಿದೆ. ತಾವೇ ಬಂದು ಉದ್ಘಾಟನೆ ಮಾಡಬೇಕೆಂದು ಪ್ರಧಾನಿಯವರಲ್ಲಿ ಕೇಳಿಕೊಂಡಿದ್ದೇನೆ ಎಂದು ತಿಳಿಸಿದರು.
ಸಣ್ಣಪುಟ್ಟ ಕೆಲಸಗಳು ಬಾಕಿ ಇದ್ದು, ಶೀಘ್ರದಲ್ಲಿಯೇ ಪೂರ್ಣಗೊಳ್ಳಲಿವೆ. ಇಡೀ ದೇಶದಲ್ಲಿಯೇ ಅತಿ ಕಡಿಮೆ 449 ಕೋಟಿ ರೂಪಾಯಿ ವೆಚ್ಚದಲ್ಲಿ ಶಿವಮೊಗ್ಗ ಏರ್ಪೋರ್ಟ್ ನಿರ್ಮಾಣವಾಗಿದೆ. ಬೆಂಗಳೂರು ಬಳಿಕ ಎರಡನೇ ಅತಿ ದೊಡ್ಡ ಏರ್ಪೋರ್ಟ್ ಎಂಬ ಖ್ಯಾತಿಗೆ ಶಿವಮೊಗ್ಗ ಏರ್ಪೋರ್ಟ್ ಪಾತ್ರವಾಗಲಿದೆ ಎಂದು ಬಿ.ಎಸ್.ವೈ. ತಿಳಿಸಿದರು.