ರನ್ ವೇಯಲ್ಲೇ ವಾಹನ ಚಾಲನೆ ಬಗ್ಗೆ ದೂರು ಹಿನ್ನೆಲೆ ವಿಮಾನ ನಿಲ್ದಾಣಕ್ಕೆ ಪ್ರವೇಶ ನಿರ್ಬಂಧ

ಶಿವಮೊಗ್ಗ: ನಗರದ ಹೊರ ವಲಯದ ಸೋಗಾನೆಯಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣಕ್ಕೆ ಸುರಕ್ಷತಾ ಹಿನ್ನೆಲೆಯಲ್ಲಿ ಅನುಮತಿ ಇಲ್ಲದೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ.

ವಿಮಾನ ನಿಲ್ದಾಣದ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ಕೇಂದ್ರದಿಂದ ಡಿಜಿಸಿಎ ತಂಡ ಪರಿಶೀಲನೆಗೆ ಆಗಮಿಸಲಿದೆ. ಇದಲ್ಲದೆ ವಿಮಾನ ನಿಲ್ದಾಣದಲ್ಲಿರುವ ಸೂಕ್ಷ್ಮ ಉಪಕರಣಗಳ ಸುರಕ್ಷತೆಯ ಹಿನ್ನೆಲೆಯಲ್ಲಿ ಮತ್ತು ಕಾಮಗಾರಿಗಳಿಗೆ ತೊಡಕಾಗದಂತೆ, ಸಾರ್ವಜನಿಕರ ಪ್ರವೇಶವನ್ನು ಉದ್ಘಾಟನೆ ಆಗುವವರೆಗೆ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಅವರು ಮನವಿ ಮಾಡಿದ್ದಾರೆ.

ನೂತನ ವಿಮಾನ ನಿಲ್ದಾಣ ವೀಕ್ಷಣೆಗೆ ನೂರಾರು ಜನರು ಆಗಮಿಸಿ, ರನ್‍ವೇಯಲ್ಲಿ ವಾಹನ ಚಲಾಯಿಸುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅವರು ಈ ಆದೇಶ ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read