alex Certify BREAKING NEWS: ಶಿವಮೊಗ್ಗ ಗಲಾಟೆ ಪ್ರಕರಣ ಹಿನ್ನಲೆ 24 ಎಫ್ಐಆರ್ ದಾಖಲು, 60 ಜನ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಶಿವಮೊಗ್ಗ ಗಲಾಟೆ ಪ್ರಕರಣ ಹಿನ್ನಲೆ 24 ಎಫ್ಐಆರ್ ದಾಖಲು, 60 ಜನ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡ ಶಾಂತಿನಗರ ಬಡಾವಣೆಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 24 ಎಫ್ಐಆರ್ ದಾಖಲಿಸಲಾಗಿದೆ ಎಂದು ಶಿವಮೊಗ್ಗದಲ್ಲಿ ಎಸ್.ಪಿ. ಮಿಥುನ್ ಕುಮಾರ್ ಹೇಳಿದ್ದಾರೆ.

ಇದುವರೆಗೆ 60 ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಕೆಲವು ಆರೋಪಿಗಳನ್ನು ಚಿತ್ರದುರ್ಗ ಕಾರಾಗೃಹಕ್ಕೆ ಶಿಫ್ಟ್ ಮಾಡಿದ್ದೇವೆ. ಬಂಧಿತರಿಂದ ಒಂದು ಕಾರ್, ಒಂದು ತ್ರಿಚಕ್ರ ವಾಹನ, ಎರಡು ಬೈಕ್ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಗಲಾಟೆ ವೇಳೆ ಕಲ್ಲೆಸೆತದಿಂದಾಗಿ 7 ಮನೆಗಳ ಗಾಜು ಪುಡಿಪುಡಿಯಾಗಿದೆ. ಬೆಳಿಗ್ಗೆಯಿಂದ ಇದುವರೆಗೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. 144 ಸೆಕ್ಷನ್ ಜಾರಿ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯುತ್ತಿಲ್ಲ. ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಪರಿಸ್ಥಿತಿ ಶಾಂತವಾಗಿದೆ ಎಂದು ಎಸ್.ಪಿ. ಮಿಥುನ್ ಕುಮಾರ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...