ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಇಂದು ಶಾಲೆ, ಕಾಲೇಜ್ ಗಳಿಗೆ ರಜೆ ನೀಡಲಾಗಿದೆ.
ನಗರದಲ್ಲಿ ಜರುಗಿದ ಘಟನೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ದಿನಾಂಕಃ- 23-02-2022 ರ ರಾತ್ರಿ 9 ಗಂಟೆಯ ವರೆಗೆ CrPC ಕಲಂ 144 ರೀತ್ಯಾ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ದಿನಾಂಕ: 22-02-2022 ರಂದು ಶಿವಮೊಗ್ಗ ನಗರ ವ್ಯಾಪ್ತಿಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.