ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಇನ್ನೂ ಎರಡು ದಿನಗಳ ಕಾಲ 144 ಸೆಕ್ಷನ್ ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಶುಕ್ರವಾರದವರೆಗೂ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಶುಕ್ರವಾರ ಬೆಳಗ್ಗೆವರೆಗೂ 144 ಸೆಕ್ಷನ್ ಜಾರಿಯಲ್ಲಿರುತ್ತದೆ. ನಂತರ 144 ಸೆಕ್ಷನ್ ವಿಸ್ತರಿಸುವ ಕುರಿತಂತೆ ಮುಂದೆ ತೀರ್ಮಾನಿಸಲಾಗುವುದು ಎಂದರು.
ಪರಿಸ್ಥಿತಿಯನ್ನು ನೋಡಿಕೊಂಡು ಮುಂದೆ 144 ಸೆಕ್ಷನ್ ವಿಸ್ತರಿಸುವ ತೀರ್ಮಾನ ಕೈಗೊಳ್ಳುತ್ತೇವೆ. ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಅವಕಾಶ ನೀಡಲಾಗಿದೆ.