alex Certify BREAKING NEWS: 2 ದಿನ ಶಾಲೆ, ಕಾಲೇಜಿಗೆ ರಜೆ; ಬೆಳಗ್ಗೆ 6 ರಿಂದ 9 ರ ವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: 2 ದಿನ ಶಾಲೆ, ಕಾಲೇಜಿಗೆ ರಜೆ; ಬೆಳಗ್ಗೆ 6 ರಿಂದ 9 ರ ವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಇನ್ನೂ ಎರಡು ದಿನಗಳ ಕಾಲ 144 ಸೆಕ್ಷನ್ ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಶುಕ್ರವಾರದವರೆಗೂ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಶುಕ್ರವಾರ ಬೆಳಗ್ಗೆವರೆಗೂ 144 ಸೆಕ್ಷನ್ ಜಾರಿಯಲ್ಲಿರುತ್ತದೆ. ನಂತರ 144 ಸೆಕ್ಷನ್ ವಿಸ್ತರಿಸುವ ಕುರಿತಂತೆ ಮುಂದೆ ತೀರ್ಮಾನಿಸಲಾಗುವುದು ಎಂದರು.

ಪರಿಸ್ಥಿತಿಯನ್ನು ನೋಡಿಕೊಂಡು ಮುಂದೆ 144 ಸೆಕ್ಷನ್ ವಿಸ್ತರಿಸುವ ತೀರ್ಮಾನ ಕೈಗೊಳ್ಳುತ್ತೇವೆ. ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...