
ಶಿವಮೊಗ್ಗ: ಶಿವಮೊಗ್ಗ 8 ತಿಂಗಳ ಹಿಂದೆ ಕೊಲೆಯಾಗಿದ್ದ ಹರ್ಷ ಕುಟುಂಬದವರಿಗೆ ದುಷ್ಕರ್ಮಿಗಳು ತಡರಾತ್ರಿ ಬೆದರಿಕೆ ಹಾಕಿದ್ದಾರೆ.
ಶಿವಮೊಗ್ಗದಲ್ಲಿ ಮತ್ತೆ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ. ಹರ್ಷನ ಕುಟುಂಬದವರಿಗೆ ಅನ್ಯ ಕೋಮಿನ ಯುವಕರು ಬೆದರಿಕೆ ಹಾಕಿದ ಘಟನೆ ನಡೆದಿದೆ. ಮೂರು ಬೈಕ್ ಗಳಲ್ಲಿ ಬಂದಿದ್ದ ಯುವಕರು ಹರ್ಷ ಕುಟುಂಬದವರಿಗೆ ಬೆದರಿಕೆ ಹಾಕಿದ್ದಾರೆ. ಅಲ್ಲಿಂದ ತೆರಳುವಾಗ ಹಿಂದೂ ಸಂಘಟನೆಯ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ.
ತಡರಾತ್ರಿ ಮಾರಕಾಸ್ತ್ರಗಳನ್ನು ಹಿಡಿದು ಬಂದಿದ್ದ ಗುಂಪು ಬೈಕ್ ನಲ್ಲಿ ಓಡಾಡಿದೆ. ಸೀಗೆಹಟ್ಟಿ ಮತ್ತು ಭರ್ಮಪ್ಪ ಬಡಾವಣೆಯಲ್ಲಿ ಓಡಾಡುತ್ತಿದ್ದ ಗುಂಪು ಹರ್ಷನ ಮನೆ ಬಳಿ ಬೈಕ್ ನಿಲ್ಲಿಸಿ ಹರ್ಷ ಸಹೋದರಿ ಹಾಗೂ ಕುಟುಂಬದವರಿಗೆ ಬೆದರಿಕೆ ಹಾಕಿದ್ದಾರೆ.
ಸ್ಥಳೀಯರು ಹಿಂಬಾಲಿಸಿದಾಗ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ವೇಳೆ ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರಕಾಶ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗಾಯಾಳು ಪ್ರಕಾಶನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೀಗೆಹಟ್ಟಿ ಬಡಾವಣೆಯಲ್ಲಿ ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ಘಟನಾ ಸ್ಥಳಕ್ಕೆ ಎಸ್.ಪಿ. ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.