alex Certify ಶಿವಮೊಗ್ಗ: ಸೇತುವೆ -ರಸ್ತೆ ಕುಸಿತ, ಪರ್ಯಾಯ ಮಾರ್ಗಗಳಲ್ಲಿ ಸಂಚಾರಕ್ಕೆ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ: ಸೇತುವೆ -ರಸ್ತೆ ಕುಸಿತ, ಪರ್ಯಾಯ ಮಾರ್ಗಗಳಲ್ಲಿ ಸಂಚಾರಕ್ಕೆ ಆದೇಶ

ಶಿವಮೊಗ್ಗ: ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766(ಸಿ)ರಲ್ಲಿ ಬರುವ ನಗರ-ಚಿಕ್ಕಪೇಟೆ ಮಧ್ಯದಲ್ಲಿರುವ ಸೇತುವೆ ಕುಸಿದಿರುವುದರಿಂದ ಮತ್ತು ಶಿವಮೊಗ್ಗ ತೀರ್ಥಹಳ್ಳಿ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ವಿಹಂಗಮ ನರ್ಸರಿ ತಿರುವಿನಿಂದ ಭಾರತಿಪುರ ತಿರುವಿನವರೆಗೆ ರಸ್ತೆ ಕುಸಿದಿರುವುದರಿಂದ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಪರ್ಯಾಯ ಮಾರ್ಗಗಳಲ್ಲಿ ಸಂಚಾರಕ್ಕೆ ಜಿಲ್ಲಾಧಿಕಾರಿ ತಾತ್ಕಾಲಿಕ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ ಮಾರ್ಗದಿಂದ ಕುಂದಾಪುರ ಮತ್ತು ಕುಂದಾಪುರದಿಂದ-ಶಿವಮೊಗ್ಗಕ್ಕೆ ಸಂಚರಿಸುವ ಭಾರೀ ವಾಹನಗಳು ಶಿವಮೊಗ್ಗ-ಸಾಗರ-ಹೊನ್ನಾವರ(ಎನ್‍ಹೆಚ್69) ಮಾರ್ಗದಲ್ಲಿ ಸಂಚರಿಸುವುದು.

ಶಿವಮೊಗ್ಗದಿಂದ ಉಡುಪಿ-ಮಂಗಳೂರು ಮತ್ತು ಮಂಗಳೂರಿನಿಂದ ಉಡುಪಿ ಶಿವಮೊಗ್ಗಕ್ಕೆ ಸಂಚರಿಸುವ ಭಾರೀ ವಾಹನಗಳು          ಶಿವಮೊಗ್ಗ-ಕೊಪ್ಪ-ಕಾರ್ಕಳ-ಮಂಗಳೂರು(ಎಸ್‍ಹೆಚ್ 57, 65 ಮತ್ತು ಎನ್‍ಹೆಚ್ 169ರಲ್ಲಿ) ಮಾರ್ಗದಲ್ಲಿ ಸಂಚರಿಸುವುದು.

ಶಿವಮೊಗ್ಗದಿಂದ ಕುಂದಾಪುರಕ್ಕೆ ಸಂಚರಿಸುವ ಭಾರೀ ವಾಹನಗಳು  ಶಿವಮೊಗ್ಗ-ಹೊಸನಗರ-ಹುಲಿಕಲ್ ಘಾಟ್-ಸಿದ್ದಾಪುರ-ಕುಂದಾಪುರ ಮಾರ್ಗದಲ್ಲಿ ಸಂಚರಿಸುವುದು

ಶಿವಮೊಗ್ಗದಿಂದ ಮಂಗಳೂರಿಗೆ ಸಂಚರಿಸುವ ಭಾರೀ ವಾಹನಗಳು   ಶಿವಮೊಗ್ಗ-ನರಸಿಂಹರಾಜಪುರ-ಕೊಪ್ಪ-ಶೃಂಗೇರಿ-ಕಾರ್ಕಳ-ಮಂಗಳೂರು ಮಾರ್ಗದಲ್ಲಿ ಸಂಚರಿಸಲು ತಿಳಿಸಲಾಗಿದೆ.

ಕುಸಿದಿರುವ ಸೇತುವೆ ಮತ್ತು ರಸ್ತೆ ದುರಸ್ತಿ ಆಗುವವರೆಗೆ ಅಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಪರ್ಯಾಯ ಮಾರ್ಗಗಳಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರ ವ್ಯವಸ್ಥೆಗೊಳಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...