alex Certify BIG NEWS: ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದ ಕಾರು: 6 ಜನರಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದ ಕಾರು: 6 ಜನರಿಗೆ ಗಂಭೀರ ಗಾಯ

ಶಿವಮೊಗ್ಗ: ಚಾಲಕನ ನಿಯಂತ್ರಣತಪ್ಪಿದ ಕಾರೊಂದು ಸೇತುವೆ ಮೇಲಿಂದ ಕೆಳಗೆ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಅಗರದಹಳ್ಳಿ ಬಳಿ ನಡೆದಿದೆ.

ಕುಟುಂಬವೊಂದು ಕಾರಿನಲ್ಲಿ ಕೊಲ್ಲೂರು, ಸಿಗಂದೂರು, ಜೋಗ ಪ್ರವಾಸ ಮುಗಿಸಿ ಚಿತ್ರದುರ್ಗಕ್ಕೆ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣತಪ್ಪಿದ ಕಾರು ಸೇತುವೆಯಿಂದ ಕೆಳಗೆ ಬಿದ್ದಿದೆ.

ಘಟನೆಯಲ್ಲಿ ಮಕ್ಕಳು ಸೇರಿ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಬೆಳಗಿನ ಜಾವ 2:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...
Odkryj sekrety doskonałego pieczenia kurczaka w piekarniku Wyjątkowe przepisy Krok po kroku: Jak stworzyć Zimowa uczta: Portoń Koktajl Detox: Twoja droga do oczyszczenia Zimowy przepis na bakłażany z Sztuka przygotowania Gotowe Domowe lody na Zimowy