ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಸಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಟ್ಟು ಕರಕಲಾಗಿದ್ದ ಕಾರ್ ನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮಿಟ್ಲುಗೋಡು ಸಮೀಪದ ಕಾಡಿನಲ್ಲಿ ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ ಮತ್ತು ಮೃತದೇಹ ಪತ್ತೆಯಾಗಿದೆ.
ಸೌದೆ ತರಲು ಹೋದ ವ್ಯಕ್ತಿಯೊಬ್ಬರು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕಾರು ಆನಂದಪುರದ ವ್ಯಕ್ತಿಯೊಬ್ಬರಿಗೆ ಸೇರಿದ್ದು ಎನ್ನಲಾಗಿದ್ದು, ಆತ್ಮಹತ್ಯೆಯೇ? ಕೊಲೆಯೇ ಎಂಬುದರ ಕುರಿತು ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.