
ಶಿವಮೊಗ್ಗ: ಶಿವಮೊಗ್ಗದ ಕಾರ್ ಶೋ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ಪ್ರಮಾಣದ ಹಾನಿ ಸಂಭವಿಸಿದೆ. ಶಂಕರಮಠ ರಸ್ತೆಯಲ್ಲಿರುವ ಹುಂಡೈ ಕಾರ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಮಾಹಿತಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರಬಹುದೆಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.