
ಶಿವಮೊಗ್ಗ: ಸಮೀಪದ ಹುಣಸೋಡು ಕಲ್ಲು ಗಣಿ ಸ್ಥಳದಲ್ಲಿ ಭಾರೀ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಲಿದ್ದಾರೆ.
ಮಧ್ಯಾಹ್ನ ಶಿವಮೊಗ್ಗಕ್ಕೆ ಆಗಮಿಸಲಿರುವ ಸಿಎಂ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಶಿವಮೊಗ್ಗ ಸಮೀಪದ ಕಲ್ಲುಗಣಿಗಾರಿಕೆ ಸ್ಥಳದಲ್ಲಿ ಜಿಲೆಟಿನ್ ತುಂಬಿದ ಲಾರಿ ಸ್ಪೋಟಗೊಂಡು 8ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಪರಿಶೀಲನೆಗೆ ಮುಂದಾಗಿದ್ದಾರೆ. ಮಧ್ಯಾಹ್ನ ಶಿವಮೊಗ್ಗಕ್ಕೆ ಆಗಮಿಸುವ ಸಿಎಂ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿದೆ.