ಶಿವಮೊಗ್ಗ: ಸಿಎಂ ಯಡಿಯೂರಪ್ಪ ತವರು ಜಿಲ್ಲೆಯಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಯಲಿದೆ. ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ವರ ಅವರ ವಿರುದ್ಧ ವಿನಾಕಾರಣ ಎಫ್ಐಆರ್ ದಾಖಲಿಸಿರುವ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಘಟಕದಿಂದ ಇಂದು ‘ಶಿವಮೊಗ್ಗ ಚಲೋ’ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಶಿವಮೊಗ್ಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ, ಸೈನ್ಸ್ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಲಾಗುವುದು. ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಾ.ಜಿ. ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.