alex Certify ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣ; 2 ದಿನ ಮೂವರು ಆರೋಪಿಗಳು ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣ; 2 ದಿನ ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಹೊಟ್ಟೆಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಎರಡು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಲಾಗಿದೆ.

ನದೀಮ್, ಅಬ್ದುಲ್ ರೆಹಮಾನ್, ತನ್ವೀರ್ ಅವರನ್ನು ಪೊಲೀಸರ ವಶಕ್ಕೆ ನೀಡಲಾಗಿದೆ. ಶಿವಮೊಗ್ಗದ ಎರಡನೇ ಜೆ.ಎಂ.ಎಫ್.ಸಿ. ನ್ಯಾಯಾಲಯ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ. ನಾಲ್ವರು ಆರೋಪಿಗಳನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದರು. ಜಬೀವುಲ್ಲಾ ಕಾಲಿಗೆ ಗುಂಡೇಟಿನ ಗಾಯವಾಗಿದ್ದರಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾಲ್ವರನ್ನು ಬಂಧಿಸಲಾಗಿತ್ತು.

ಇನ್ನು ಗಾಯಾಳು ಪ್ರೇಮ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ನಿನ್ನೆ ರಾತ್ರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರೇಮ್ ಸಿಂಗ್ ಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಆಪರೇಷನ್ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...