ಶಿವಮೊಗ್ಗ: ಅಪ್ರಾಪ್ತೆಯನ್ನು ಪ್ರೀತಿಸಿ ಆಕೆ ಗರ್ಭಿಣಿಯಾದ ನಂತರ ಮದುವೆಯಾಗಿದ್ದ ವ್ಯಕ್ತಿಗೆ ಶಿವಮೊಗ್ಗ ನ್ಯಾಯಾಲಯ 10 ವರ್ಷ ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಅಪ್ರಾಪ್ತೆ ಪ್ರೀತಿಸುವುದಾಗಿ ನಂಬಿಸಿದ್ದ ಆರೋಪಿ ಆಕೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದ. ಗರ್ಭಿಣಿಯಾದ ನಂತರ ದೇವಾಲಯವೊಂದರಲ್ಲಿ ಮದುವೆಯಾಗಿದ್ದ. 2017 ರ ಜೂನ್ 28 ರಂದು ಭದ್ರಾವತಿಯ ಚೌಡೇಶ್ವರಿ ದೇಗುಲದಲ್ಲಿ ಆರೋಪಿ ಅಪ್ರಾಪ್ತೆಯನ್ನು ಮದುವೆಯಾಗಿದ್ದ. ಬಾಲಕಿಯ ಪೋಷಕರು ಮಹಿಳಾ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದರು.
ಯಲವಟ್ಟಿ ತಂಡದ 30 ವರ್ಷದ ಬೀರೇಶ ಶಿಕ್ಷೆಗೆ ಒಳಗಾದವ. 17 ವರ್ಷದ ಅಪ್ರಾಪ್ತೆಯನ್ನು ಪ್ರೀತಿಸಿ ಗರ್ಭಿಣಿಯಾಗಲು ಕಾರಣವಾಗಿದ್ದ. ನಂತರ ಮದುವೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ವಿಚಾರಣೆ ನಡೆದು 10 ಸಾವಿರ ರೂಪಾಯಿ ದಂಡ, 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಹೇಳಲಾಗಿದೆ.