alex Certify ಪುತ್ರಿಯನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಬಿಗ್ ಶಾಕ್: ಮದುವೆಗೆ ಮೊದಲೇ ಗರ್ಭಿಣಿಯಾಗಿದ್ದ ಯುವತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುತ್ರಿಯನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಬಿಗ್ ಶಾಕ್: ಮದುವೆಗೆ ಮೊದಲೇ ಗರ್ಭಿಣಿಯಾಗಿದ್ದ ಯುವತಿ ಸಾವು

ಶಿವಮೊಗ್ಗ: ಮದುವೆಗೆ ಮೊದಲೇ ಗರ್ಭಿಣಿಯಾಗಿದ್ದ ಯುವತಿ ಹಾಗೂ ಮಗು ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ತಾಲೂಕಿನ ಕುಂಸಿ ಗ್ರಾಮದ 20 ವರ್ಷದ ಯುವತಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಲಾಕ್ ಡೌನ್ ಸಂದರ್ಭದಲ್ಲಿ ಊರಿಗೆ ಮರಳಿದ್ದರು. ಆಕೆ ಗರ್ಭಿಣಿಯಾಗಿರುವುದು ಮನೆಯವರಿಗೆ ಗೊತ್ತಿರಲಿಲ್ಲ. ಆದರೆ, ಹೊಟ್ಟೆ ಕಾಣಿಸಿಕೊಂಡಿದ್ದರಿಂದ ಮನೆಯವರು ಪ್ರಶ್ನಿಸಿದಾಗ ಸುಳ್ಳು ಹೇಳಿದ್ದಳು ಎಂದು ಹೇಳಲಾಗಿದೆ.

ಹೊಟ್ಟೆ ನೋವಿನ ಕಾರಣ ಆಕೆಯನ್ನು ಆಸ್ಪತ್ರೆಗೆ ಸೇರಿಸಿದಾಗ ಗರ್ಭಿಣಿ ಎನ್ನುವುದು ಗೊತ್ತಾಗಿದೆ. ಹೊಟ್ಟೆಯಲ್ಲಿದ್ದ ಶಿಶು ಮೃತಪಟ್ಟಿದ್ದು, ತೀವ್ರ ರಕ್ತಸ್ರಾವದಿಂದ ಯುವತಿಯೂ ಮೃತಪಟ್ಟಿದ್ದಾಳೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...