ಶಿವಮೊಗ್ಗ: ಕೆಲಸ ಒತ್ತಡದಿಂದಾಗಿ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ನೌಕರರ ಗಿರಿರಾಜ್ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾರೆ.
ಗಿರಿರಾಜ್ ಪತ್ತೆಗಾಗಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ, ಅವರ ಸುಳಿವು ಸಿಕ್ಕಿರಲಿಲ್ಲ. ಗುರುವಾರ ಅಸ್ವಸ್ಥ ಸ್ಥಿತಿಯಲ್ಲಿದ್ದ ಗಿರಿರಾಜ್ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾರೆ. ಅವರನ್ನು ಸ್ಥಳೀಯ ಪೊಲೀಸರಿಗೆ ಒಪ್ಪಿಸಿ, ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಲಾಗಿದೆ. ಚಿಕಿತ್ಸೆ ಕೊಡಿಸಿದ ಅಲ್ಲಿನ ಸರ್ಕಾರಿ ನೌಕರರು ಶಿವಮೊಗ್ಗಕ್ಕೆ ಕಳುಹಿಸಲು ವ್ಯವಸ್ಥೆ ಮಾಡಿದ್ದಾರೆನ್ನಲಾಗಿದೆ.