
ಶಿವಮೊಗ್ಗ: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಿವಮೊಗ್ಗದಲ್ಲಿ ಶಂಕಿತ ಡೆಂಗ್ಯೂ ಜ್ವರ ನರ್ಸ್ ಓರ್ವರನ್ನು ಬಲಿ ಪಡೆದಿದೆ.
ಹೇಮಾ (45) ಮೃತ ನರ್ಸ್. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಹೇಮಾ, ಕೆಲ ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು.
ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಈಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಡೆಂಗ್ಯೂ ಸೋಂಕಿನಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.