alex Certify ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್: ‘ಸರ್ವರಿಗೂ ಉದ್ಯೋಗ’ ಶೀರ್ಷಿಕೆಯಡಿ ಉದ್ಯೋಗ ಮೇಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್: ‘ಸರ್ವರಿಗೂ ಉದ್ಯೋಗ’ ಶೀರ್ಷಿಕೆಯಡಿ ಉದ್ಯೋಗ ಮೇಳ

ಶಿವಮೊಗ್ಗ: ‘ಸರ್ವರಿಗೂ ಉದ್ಯೋಗ” ಶೀರ್ಷಿಕೆಯಡಿ ಫೆ.24 ರಂದು ನಗರದ ಎಟಿಎನ್‌ಸಿಸಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಜಿಲ್ಲಾ ಮಟ್ಟದ ಉದ್ಯೋಗ ಮೇಳ(ಕೌಶಲ್ಯ ಮತ್ತು ರೋಜ್‌ಗಾರ್ ಮೇಳ) ಆಯೋಜಿಸುವ ಕುರಿತು ಜಿ.ಪಂ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ ಮಾಹಿತಿ ನೀಡಿದ್ದಾರೆ.

ಕೌಶಲ್ಯಾವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಇವರ ಸಹಯೋಗದೊಂದಿಗೆ ಫೆ.24ರ ಬೆಳಿಗ್ಗೆ 9.30 ಕ್ಕೆ ನಗರದ ಎಟಿಎನ್‌ಸಿ ಕಾಲೇಜಿನಲ್ಲಿ ಉದ್ಯೋಗ ಮೇಳ ಆಯೋಜಿಸಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಮೇಳವನ್ನು ಉದ್ಘಾಟಿಸುವರು. ಶಿಷ್ಟಾಚಾರದಂತೆ ಉದ್ಘಾಟನಾ ಕಾರ್ಯಕ್ರಮಕ್ಕೆ ಸಂಸತ್ ಸದಸ್ಯರು, ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರನ್ನು ಮುಖ್ಯ ಅತಿಥಿಗಳಾಗಿ ಆಹ್ವಾನಿಸಲಾಗುವುದು ಎಂದರು.

ಸುಮಾರು 50 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಮೇಳದಲ್ಲಿ ಭಾಗಿಯಾಗಲಿದ್ದು, ನೇರ ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರ ನೀಡಲಾಗುತ್ತದೆ.

ಉದ್ಯೋಗ ಮೇಳದಲ್ಲಿ ಯುವನಿಧಿ ನೊಂದಣಿ ಅಭಿಯಾನವನ್ನು ಸಹ ಕೈಗೊಳ್ಳಲಾಗುವುದು. ಅದಕ್ಕಾಗಿ ಪ್ರತ್ಯೇಕ ಮಳಿಗೆ ಸ್ಥಾಪಿಸಿ, ಇದುವರೆಗೆ ನೋಂದಣಿಯಾಗದ ಅರ್ಹ ಅಭ್ಯರ್ಥಿಗಳನ್ನು ಯುವನಿಧಿಗೆ ನೋಂದಣಿ ಮಾಡಲಾಗುವುದು ಎಂದರು.

ಜಿ.ಪಂ ಸಿಇಓ ಹೇಮಂತ್ ಎನ್ ಮಾತನಾಡಿ, ಉದ್ಯೋಗ ಮೇಳವನ್ನು ಅಚ್ಚುಕಟ್ಟಾಗಿ ಮತ್ತು ವ್ಯವಸ್ಥಿತವಾಗಿ ಆಯೋಜಿಸಬೇಕು. ಯಾವ ಕೊಠಡಿಯಲ್ಲಿ ಯಾವ ವಿದ್ಯಾರ್ಹತೆ ಪಡೆದವರಿಗೆ ಸಂದರ್ಶನವೆಂದು ಫಲಕ ಹಾಕಿರಬೇಕು. ಕುಡಿಯುವ ನೀರು ಇತರೆ ಮೂಲಭೂತ ಸೌಕರ್ಯ ವ್ಯವಸ್ಥೆ ಸಮರ್ಪಕವಾಗಿ ಮಾಡಬೇಕು.

ಜಿಲ್ಲೆಯಾದ್ಯಂತ ಉತ್ತಮ ಪ್ರಚಾರ ಕೈಗೊಳ್ಳಬೇಕು. ನಗರ ಮುಖ್ಯ ಭಾಗಗಳಲ್ಲಿ ಹಾಗೂ ತಾಲ್ಲೂಕಿನ ಮುಖ್ಯ ಪ್ರದೇಶದಲ್ಲಿ ಫ್ಲೆಕ್ಸ್, ಕಸ ತೆಗೆದುಕೊಂಡ ವಾಹನದ ಮೂಲಕ ಪ್ರಚಾರ, ಜಿಲ್ಲಾ ಕೈಗಾರಿಕಾ ಕೇಂದ್ರ, ಐಟಿಐ, ಡಿಪ್ಲೊಮಾ, ಇಂಜಿನಿಯರಿAಗ್ ಕಾಲೇಜು, ವಸತಿ ಶಾಲಾ-ಕಾಲೇಜುಗಳಲ್ಲಿ ಮೇಳದ ಕುರಿತು ಮಾಹಿತಿ ನೀಡಬೇಕು ಎಂದರು.

ಜಿಲ್ಲಾ ಕೌಶಲ್ಯಾಭಿವೃದ್ದಿ ಇಲಾಖೆಯ ಅಧಿಕಾರಿ ಸುರೇಶ್ ಮಾತನಾಡಿ, ಈಗಾಗಲೇ 65 ಕಂಪನಿಗಳ ಜೊತೆ ಮಾತನಾಡಲಾಗಿದೆ. 50 ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ. ಯುವನಿಧಿ ಫಲಾನುಭವಿಗಳು, ತಾಂತ್ರಿಕ ತರಬೇತಿ ಪಡೆದವರು, 18 ರಿಂದ 35 ವಯೋಮಿತಿಯೊಳಗಿನ ನಿರುದ್ಯೋಗ ಯುವಕ-ಯುವತಿಯರು ಮತ್ತು ಉದ್ಯೋಗಕ್ಕೆ ತಕ್ಕ ವಿದ್ಯಾರ್ಹತೆ ಹೊಂದಿರು ಆಸಕ್ತರು ಆನ್‌ಲೈನ್https://forms.gle/se41pagcoriexpppg ಮೂಲಕ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಈಗಾಗಲೇ ಲಿಂಕ್‌ನ್ನು ನೀಡಲಾಗಿದ್ದು, ಸ್ಪಾಟ್ ನೋಂದಣಿ ಸಹ ಮಾಡಿಸಬಹುದು. ಹೆಚ್ಚಿನ ಮಾಹಿತಿಗೆ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮ ದೂ.ಸಂ: 08182-255294, 9019485688 ನ್ನು ಸಂಪರ್ಕಿಸಬಹುದು ಎಂದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷರು, ಸದಸ್ಯರು, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರು, ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು, ವಿವಿಧ ಐಟಿಐ, ಡಿಪ್ಲೊಮಾ, ಇಂಜಿನಿಯರಿAಗ್ ಕಾಲೇಜುಗಳ ಮುಖ್ಯಸ್ಥರು ಹಾಜರಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Optická ilúzia: Odhaľte svoju skrytú silu v Optický klam pre Rozhodnite sa rýchlo: