
ಶಿವಮೊಗ್ಗ: ನಗರದ ಗಾಂಧಿ ಬಜಾರ್ ನಲ್ಲಿ ತಡರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ನಾವೆಲ್ಟೀಸ್ ಅಂಗಡಿಯೊಂದಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿದ್ದು, ಇಡೀ ಕಟ್ಟಡಕ್ಕೆ ವ್ಯಾಪಿಸಿ ಹೊತ್ತಿ ಉರಿದಿದೆ.
ಬೆಂಕಿಯ ಜ್ವಾಲೆ ಆವರಿಸಿದ್ದನ್ನು ಗಮನಿಸಿದವರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಕೂಡಲೇ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ, ಈ ವೇಳೆಗಾಗಲೇ ಬೆಂಕಿ ವ್ಯಾಪಿಸಿದ್ದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.