alex Certify ಶಿವಮೊಗ್ಗ: ತಡರಾತ್ರಿ ಯುವಕನಿಗೆ ಚಾಕು ಇರಿದ ಆರೋಪಿ ಮೇಲೆ ಫೈರಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ: ತಡರಾತ್ರಿ ಯುವಕನಿಗೆ ಚಾಕು ಇರಿದ ಆರೋಪಿ ಮೇಲೆ ಫೈರಿಂಗ್

ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಆರೋಪಿ ಜಬಿವುಲ್ಲಾನನ್ನು ಬಂಧಿಸಲಾಗಿದೆ.

ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯಲ್ಲಿ ತಡರಾತ್ರಿ ಘಟನೆ ನಡೆದಿದೆ. ನಮೋ ಶಂಕರ ಲೇಔಟ್ ನಲ್ಲಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಆರೋಪಿ ಜಬಿವುಲ್ಲಾ ಬಂಧನಕ್ಕೆ ಪೊಲೀಸರು ತೆರಳಿದ್ದ ವೇಳೆಯಲ್ಲಿ ಪೊಲೀಸರ ಮೇಲೆಯೇ ಹಲ್ಲಿಗೆ ಯತ್ನಿಸಿ ಪರಾರಿಯಾಗಲು ಮುಂದಾಗಿದ್ದಾನೆ. ಈ ವೇಳೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ವಿನೋಬನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಮಂಜುನಾಥ ಕುರಿ ಫೈರಿಂಗ್ ಮಾಡಿದ್ದಾರೆ.

ಜಬೀವುಲ್ಲಾನನ್ನು ವಶಕ್ಕೆ ಪಡೆದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗಾಗಲೇ ದೊಡ್ಡಪೇಟೆ ಠಾಣೆ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನದೀಮ್ ಮತ್ತು ಅಬ್ದುಲ್ ರೆಹಮಾನ್ ಅವರನ್ನು ಬಂಧಿಸಿದ್ದಾರೆ. ಸಾವರ್ಕರ್ ಫ್ಲೆಕ್ಸ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದ ಹಿನ್ನಲೆಯಲ್ಲಿ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...