alex Certify ಮಧ್ಯ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಶಿವಮೊಗ್ಗದಿಂದ ತಿರುಪತಿ, ಹೈದರಾಬಾದ್, ಗೋವಾಕ್ಕೆ ವಿಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಧ್ಯ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಶಿವಮೊಗ್ಗದಿಂದ ತಿರುಪತಿ, ಹೈದರಾಬಾದ್, ಗೋವಾಕ್ಕೆ ವಿಮಾನ

ಶಿವಮೊಗ್ಗ: ಶಿವಮೊಗ್ಗದಿಂದ ಬೆಂಗಳೂರು ನಡುವೆ ವಿಮಾನಯಾನ ಆರಂಭವಾಗಿದ್ದು, ಇನ್ನು ತಿರುಪತಿ, ಗೋವಾ, ಹೈದರಾಬಾದ್ ನಗರಗಳಿಗೂ ವಿಮಾನ ಸಂಚರಿಸಲಿದೆ. ಈಗಾಗಲೇ ಟಿಕೆಟ್ ಬುಕಿಂಗ್ ಆರಂಭವಾಗಿದೆ.

ಸ್ಟಾರ್ ಏರ್ ಲೈನ್ಸ್ ವಿಮಾನಯಾನ ಸಂಸ್ಥೆ ಶಿವಮೊಗ್ಗದಿಂದ ಗೋವಾ, ತಿರುಪತಿ, ಹೈದರಾಬಾದ್ ಗೆ ವಾರದಲ್ಲಿ 6 ದಿನ ವಿಮಾನಯಾನ ಸೇವೆ ಆರಂಭಿಸಲಿದೆ.

ಬೆಳಗ್ಗೆ 9:30ಕ್ಕೆ ಸ್ಟಾರ್ ಏರ್ ವಿಮಾನ ಹೈದರಾಬಾದ್ ನಿಂದ ಹೊರಟು 10:35 ಕ್ಕೆ ಶಿವಮೊಗ್ಗ ತಲುಪಲಿದೆ. 11 ಗಂಟೆಗೆ ಶಿವಮೊಗ್ಗದಿಂದ ಹೊರಟು ಮಧ್ಯಾಹ್ನ 12 ಗಂಟೆಗೆ ತಿರುಪತಿ ತಲುಪುತ್ತದೆ. ತಿರುಪತಿಯಿಂದ ಮಧ್ಯಾಹ್ನ 12:35 ಕ್ಕೆ ಹೊರಟು ಮಧ್ಯಾಹ್ನ 1:40ಕ್ಕೆ ಶಿವಮೊಗ್ಗ ತಲುಪುತ್ತದೆ. ಮಧ್ಯಾಹ್ನ 1.55ಕ್ಕೆ ಶಿವಮೊಗ್ಗದಿಂದ ಹೊರಟು 2.45ಕ್ಕೆ ಗೋವಾ ತಲುಪಲಿದೆ. ಗೋವಾದಿಂದ ಮಧ್ಯಾಹ್ನ 3:15ಕ್ಕೆ ಹೊರಟು ಸಂಜೆ 4.05ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದೆ. ಸಂಜೆ 4:30ಕ್ಕೆ ಶಿವಮೊಗ್ಗದಿಂದ ಹೊರಟು 5.30 ಕ್ಕೆ ಹೈದರಾಬಾದ್ ಗೆ ತಲುಪುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...