ಶಿವಮೊಗ್ಗ: ಹಾಡಹಗಲೇ ಗೆಳೆಯನೊಬ್ಬ ತನ್ನ ಸ್ನೇಹಿತನ ಕಣ್ಣಿಗೆ ಖಾರದ ಪುಡಿ ಎರಚಿ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗದ ಶರಾವತಿ ನಗರದ ಪಾಂಡುರಂಗ ದೇಗುಲದ ಬಳಿ ನಡೆದಿದೆ.
ಅರುಣ್ ಎಂಬಾತ ತನ್ನ ಸ್ನೇಹಿತ ಅರುಣ್ ಎಂಬಾತನಿಗೆ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ರವಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಮನಸ್ತಾಪವುಂಟಾಗಿತ್ತು. ಇದೇ ಕಾರಣಕ್ಕೆ ಅರುಣ್, ರವಿ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ.