ಶಿವಮೊಗ್ಗ: ರಾಜ್ಯದಲ್ಲಿ ವಿರೋಧ ಪಕ್ಷ ಇಲ್ಲವೆಂಬ ಬಿಜೆಪಿ ನಾಯಕರ ಹೇಳಿಕೆಗೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವಿರೋಧ ಪಕ್ಷ ಕಾಂಗ್ರೆಸ್ ಗಟ್ಟಿಯಾಗಿದೆ. ಕಾಂಗ್ರೆಸ್ ನಾಯಕರು ಪವರ್ ಫುಲ್ ಆಗಿದ್ದಾರೆ. ನಮ್ಮಲ್ಲಿ ಯಾವುದೇ ರೀತಿಯ ಗುಂಪುಗಾರಿಕೆ ಇಲ್ಲ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಎಪಿಎಂಸಿ ವ್ಯವಸ್ಥೆಯನ್ನೇ ಹಾಳು ಮಾಡಿದೆ ಎಂದು ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ಇವರು ಅಂಬಾನಿ ಅಂತಹವರಿಗೋಸ್ಕರ ಕಾಯ್ದೆಯನ್ನು ತರುತ್ತಿದ್ದಾರೆ. ಹೀಗಾಗಿ ಕೃಷಿ ತಿದ್ದುಪಡಿ ಕಾಯ್ದೆಯ ಬಗ್ಗೆ ರೈತರಿಗೆ ಅನುಮಾನವಿದ್ದು ಇದನ್ನು ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ.
ರಾಜ್ಯದ ಪರಿಸ್ಥಿತಿ ಹದಗೆಟ್ಟಿದೆ. ಆದರೂ ಕೇಂದ್ರದಿಂದ ಜಿಎಸ್ಟಿ ಅನುದಾನ ಬಂದಿಲ್ಲ. ನಮ್ಮ ರಾಜ್ಯದ ಬಿಜೆಪಿ ಸಂಸದರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.