ಶಿವಮೊಗ್ಗ: ಶಿವಮೊಗ್ಗದಿಂದ ಗೋವಾಗೆ ತೆರಳಬೇಕಿದ್ದ ಸ್ಟಾರ್ ಏರ್ ಲೈನ್ಸ್ ವಿಮಾನ ಇಂದು ಕೊನೇ ಕ್ಷಣದಲ್ಲಿ ರದ್ದಾಗಿದ್ದು, ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿಯೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ತಾಂತ್ರಿಕ ದೋಷದ ಕಾರಣಕ್ಕೆ ಕೊನೇ ಕ್ಷಣದಲ್ಲಿ ವಿಮಾನ ರದ್ದಾಗಿದೆ. ಆಗಲೇ ಗೋವಾಕ್ಕೆ ತೆರಳಲು ವಿಮಾನ ನಿಲ್ದಾಣಕ್ಕೆ ಬಂದಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ನಿಲ್ದಾಣದಲ್ಲಿಯೇ ಪರದಾಡುವಂತಾಗಿದೆ. ಇಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗದಿಂದ ಗೋವಾಕ್ಕೆ ವಿಮಾನ ಹಾರಾಟ ನಡೆಸಬೇಕಿತ್ತು.
ನಿನ್ನೆ ಕೂಡ ಗೋವಾಕ್ಕೆ ತೆರಳಬೇಕಿದ್ದ ವಿಮಾನ ರದ್ದಾಗಿತ್ತು. ಕೊನೇ ಕ್ಷಣದಲ್ಲಿ ತಾಂತ್ರಿಕ ದೋಷ ಎಂದು ನೆಪ ಹೇಳಿ ವಿಮಾನ ರದ್ದು ಮಾಡಿರುವುದಕ್ಕೆ ಪ್ರಯಾಣಿಕರು ವಿಮಾನ ಯಾನ ಸಂಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಮಾನ ಯಾನ ಸಂಸ್ಥೆ ಯಾವುದೇ ಬದಲಿ ವ್ಯವಸ್ಥೆಯನ್ನು ಮಾಡಿಲ್ಲ. ಅಲ್ಲದೇ ಅಧಿಕಾರಿಗಳು ಕೂಡ ಪ್ರಯಾಣಿಕರ ಸಮಸ್ಯೆಗೆ ಸರಿಯಾಗಿ ಸ್ಪಂದಿಸಿಲ್ಲ ಎಂದು ಕಿಡಿಕಾರಿದ್ದಾರೆ.