alex Certify ಶಿವಮೊಗ್ಗ: ಮೂರನೇ ಅಲೆ ತಡೆಗೆ ಮಹತ್ವದ ಕ್ರಮ, ಮಾರ್ಗಸೂಚಿ ತಿದ್ದುಪಡಿ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ: ಮೂರನೇ ಅಲೆ ತಡೆಗೆ ಮಹತ್ವದ ಕ್ರಮ, ಮಾರ್ಗಸೂಚಿ ತಿದ್ದುಪಡಿ ಆದೇಶ

ಶಿವಮೊಗ್ಗ: ನೆರೆಹೊರೆ ರಾಜ್ಯಗಳಲ್ಲಿ ಕೋವಿಡ್ 19 ರ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಮುಂದೆ ಸಂಭವಿಸಬಹುದಾದ ಕೋವಿಡ್ 19 ಮೂರನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಈ ಹಿಂದೆ ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ಕೆಳಕಂಡಂತೆ ತಿದ್ದುಪಡಿ ಮಾಡಿ ಆದೇಶಿಸಿರುತ್ತಾರೆ.

ಜಿಲ್ಲಾ ವ್ಯಾಪ್ತಿಯ ಎಲ್ಲಾ ಲಾಡ್ಜ್, ಹೋಟೆಲ್, ಹೋಂ ಸ್ಟೇ/ಅರಣ್ಯ ಇಲಾಖೆ ವಸತಿ ಗೃಹಗಳಲ್ಲಿ ತಂಗಲಿರುವವರು ಬುಕಿಂಗ್ ಸಮಯದಲ್ಲಿ ಸದರಿ ಪ್ರವಾಸಿಗರು ಚೆಕ್‍ಇನ್ ದಿನದಿಂದ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್‍ಟಿಪಿಸಿಆರ್ ನೆಗೆಟಿವ್ ವರದಿ/ಆರ್‍ಎಟಿ ನೆಗೆಟಿವ್ ವರದಿ/ಕೋವಿಡ್ 2ನೇ ಲಸಿಕೆ ಪಡೆದ ಪ್ರಮಾಣ ಪತ್ರ ಹೊಂದಿರಬೇಕಾದ್ದನ್ನು ಕಡ್ಡಾಯಗೊಳಿಸಲಾಗಿದೆ.

ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು ಹಾಗೂ ಇನ್ನಿತರ ಪ್ರೇಕ್ಷಣೀಯ ಸ್ಥಳಗಳಾದ ಜೋಗ್ ಜಲಪಾತ, ಆಗುಂಬೆಯ ಸೂರ್ಯಾಸ್ಥ ವೀಕ್ಷಣೆಯ ಸ್ಥಳ, ಗಾಜನೂರು ಡ್ಯಾಂ, ಬಿ.ಆರ್.ಪಿ ಡ್ಯಾಂ, ಹುಲಿ ಮತ್ತು ಸಿಂಹಧಾಮ, ಸಕ್ರೆಬೈಲು ಆನೆ ಬಿಡಾರ ಮತ್ತು ಪ್ರವಾಸೋದ್ಯಮ, ಅರಣ್ಯ ಇಲಾಖೆ, ಪ್ರಾಚ್ಯ ವಸ್ತು ಮತ್ತು ಪುರಾತತ್ವ ಇಲಾಖೆಗಳ ಪ್ರವಾಸಿ ತಾಣಗಳು ಮತ್ತು ಇತ್ಯಾದಿ ಪ್ರೇಕ್ಷಣೀಯ ಸ್ಥಳಗಳಿಗೆ ಆಗಮಿಸುವ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್‍ಟಿಪಿಸಿಆರ್ ನೆಗೆಟಿವ್ ವರದಿ/ಆರ್‍ಎಟಿ ನೆಗೆಟಿವ್ ವರದಿ/ಕೋವಿಡ್ 2ನೇ ಲಸಿಕೆ ಪಡೆದ ಪ್ರಮಾಣ ಪತ್ರ ಹೊಂದಿರಬೇಕಾದ್ದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...