ಶಿವಮೊಗ್ಗ: ನಾಳೆಯಿಂದ ಶಿವಮೊಗ್ಗದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಮಾಹಿತಿ ನೀಡಿದ್ದಾರೆ.
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯಾದ ನಂತರ ಶಿವಮೊಗ್ಗದಲ್ಲಿ ಗಲಭೆ ತೀವ್ರಗೊಂಡಿದ್ದರಿಂದ ನಿಷೇಧಾಜ್ಞೆ, ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಕಳೆದ ಸೋಮವಾರದಿಂದ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಕರ್ಫ್ಯೂ ಸಡಿಲಿಕೆ ಬಳಿಕ ನಗರವು ಸಹಜ ಸ್ಥಿತಿಗೆ ಮರಳಿರುವುದರಿಂದ ನಾಳೆಯಿಂದ ಶಾಲಾ-ಕಾಲೇಜುಗಳು ಆರಂಭವಾಗಲಿವೆ.