ಶಿವಮೊಗ್ಗ: ಕರ್ನಾಟಕ ಸರ್ಕಾರದ ಆದೇಶ ಹಾಗೂ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಗೋಪಾಳದಲ್ಲಿ ನಡೆಸಲಾಗುತ್ತಿದ್ದ ಹುಕ್ಕಾಬಾರ್ ಮೇಲೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ದಾಳಿ ನಡೆಸಿ ತೆರವುಗೊಳಿಸಿದ್ದಾರೆ.
ಉಪ ಪೋಲಿಸ್ ನಿರೀಕ್ಷಕ ರಘುನಾಥ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಹೇಮಂತ್ ರಾಜ್ ಅರಸ್, ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.