alex Certify ನಿವೇಶನ ರಹಿತರಿಗೆ ಸಿಹಿ ಸುದ್ದಿ: ಸೈಟ್, ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿವೇಶನ ರಹಿತರಿಗೆ ಸಿಹಿ ಸುದ್ದಿ: ಸೈಟ್, ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ರಾಜೀವ್‍ಗಾಂಧಿ ಗ್ರಾಮೀಣ ವಸತಿ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ಪರಿಶಿಷ್ಟ ವರ್ಗದ ಅಲೆಮಾರಿ/ಅರೆ ಅಲೆಮಾರಿ/ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ವಿಶೇಷ ಅಭಿವೃದ್ಧಿ ಯೋಜನೆಯಡಿ ನಿವೇಶನ ಒದಗಿಸುವ ಹಾಗೂ ಮನೆ ನಿರ್ಮಾಣ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲಾಗುತ್ತಿದ್ದು, ಈ ಜನಾಂಗದ ನಿವೇಶನ ರಹಿತರಿಗೆ ಹಾಗೂ ನಿವೇಶನ ಹೊಂದಿರುವವರಿಗೆ ಮನೆ ನಿರ್ಮಾಣಕ್ಕಾಗಿ ಅರ್ಜಿ ಆಹ್ವಾನಿಸಿದೆ.

ನಿಗಧಿತ ನಮೂನೆ ಅರ್ಜಿಗಳನ್ನು ಸಂಬಂಧಿಸಿದ ತಾಲೂಕು ಸಹಾಯಕ ನಿರ್ದೇಶಕರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆಗಳಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಿಸಿದ ದಾಖಲೆಗಳೊಂದಿಗೆ ಅದೇ ಕಚೇರಿಗೆ ದಿ: 20-09-2021 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಠ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: 08182-279222 / 9482762350 ಗಳನ್ನು ಸಂಪರ್ಕಿಸುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...