ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆ.23 ರ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 08182-255293, 9380663606 ಮತ್ತು 9482023412, 9535312531 ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ತಿಳಿಸಿರುತ್ತಾರೆ.