alex Certify ಶಿವಮೊಗ್ಗ: ವೈಭವದ ಮಾರಿಕಾಂಬ ಜಾತ್ರೆಗೆ ದಿನಾಂಕ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ: ವೈಭವದ ಮಾರಿಕಾಂಬ ಜಾತ್ರೆಗೆ ದಿನಾಂಕ ನಿಗದಿ

ಶಿವಮೊಗ್ಗ: ರಾಜ್ಯದಲ್ಲಿ ಪ್ರಮುಖ ಮಾರಿಜಾತ್ರೆಗಳಲ್ಲಿ ಒಂದಾದ ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ದಿನಾಂಕ ನಿಗದಿಯಾಗಿದೆ.

ಫೆಬ್ರವರಿ 22 ರಿಂದ 26 ರವರೆಗೆ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆ ನಡೆಸಲು ಕಾರ್ಯಕಾರಿ ಸಮಿತಿ ಸಭೆಯಲ್ಲಿ ದಿನಾಂಕ ನಿಗದಿ ಮಾಡಲಾಗಿದೆ. ಐದು ದಿನಗಳ ಕಾಲ ವಿಜೃಂಭಣೆಯಿಂದ ಜಾತ್ರೆ ನಡೆಯಲಿದ್ದು, ಭಕ್ತರಿಗೆ ಮುಂಚಿತವಾಗಿ ಮಾಹಿತಿ ತಲುಪಿಸಲು ದೇಗುಲದ ಎದುರು ಪೋಸ್ಟರ್ ಹಾಕಲಾಗಿದೆ.

ರಾಜ್ಯದ ಪ್ರಮುಖ ಮಾರಿಜಾತ್ರೆಗಳಲ್ಲಿ ಒಂದಾದ ಶಿವಮೊಗ್ಗ ಕೋಟೆ ಮಾರಿಕಾಂಬ ಜಾತ್ರೆಗೆ ರಾಜ್ಯದ ವಿವಿಧ ಕಡೆಗಳಿಂದ ಲಕ್ಷಾಂತರ ಭಕ್ತರು ಬರುತ್ತಾರೆ. ಇದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ವಿವಿಧ ಸಮಿತಿಗಳನ್ನು ರಚಿಸಲು ದೇವಾಲಯ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...