ಶಿವಮೊಗ್ಗ: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆಯೇ ಶಿವಮೊಗ್ಗ ಮಹಾನಗರ ಪಾಲಿಕೆ ಸಿಬ್ಬಂದಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.
ಅಕೌಂಟ್ ಸೆಕ್ಷನ್ ಕೇಸ್ ವರ್ಕರ್ ಸಿದ್ದೇಶ್ ಲೋಕಾಯುಕ್ತ ಬಲೆಗೆ ಬಿದ್ದವರು. ಹೊಸನಗರ ಗುತ್ತಿಗೆದಾರ ಸುನೀಲ್ ಕುಮಾರ್ ಎಂಬುವವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ಕಾಮಗಾರಿ ಬಿಲ್ ಪಾಸ್ ಮಾಡಲು 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಸಿದ್ದೇಶ್ ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.