ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಎನ್.ಎಸ್.ಯು.ಐ. ಕಾರ್ಯಕರ್ತರು ಬೆಂಬಲ ಸೂಚಿಸಿದ್ದಾರೆ.
ರೈತರ ಹೋರಾಟಕ್ಕೆ ತಟ್ಟೆ ಬಾರಿಸುವ ಮೂಲಕ ಸಾಥ್ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ‘ಮನ್ ಕಿ ಬಾತ್’ ಭಾಷಣ ಮಾಡುವಾಗ ಶಿವಮೊಗ್ಗದ ಶಿವಪ್ಪ ನಾಯಕ ವೃತ್ತದಲ್ಲಿ ಎನ್.ಎಸ್.ಯು.ಐ. ಕಾರ್ಯಕರ್ತರು ತಟ್ಟೆ ಬಾರಿಸುವ ಮೂಲಕ ರೈತರ ಹೋರಾಟ ಬೆಂಬಲಿಸಿದ್ದಾರೆ.
ದೆಹಲಿ ಹೋರಾಟ ಬೆಂಬಲಿಸಿ ‘ಮನ್ ಕಿ ಬಾತ್’ ಭಾಷಣದ ಸಂದರ್ಭದಲ್ಲಿ ತಟ್ಟೆ ಬಾರಿಸಿ ಪ್ರತಿಭಟನೆ ನಡೆಸಲು ಭಾರತೀಯ ಕಿಸಾನ್ ಯೂನಿಯನ್ ಕರೆ ನೀಡಿದ್ದು, ಅಂತೆಯೇ ಕಾರ್ಯಕರ್ತರು ತಟ್ಟೆ ಬಾರಿಸಿ ಕಾಯ್ದೆ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಎನ್.ಎಸ್.ಯು.ಐ. ರಾಜ್ಯ ಉಪಾಧ್ಯಕ್ಷ ಕೆ. ಚೇತನ್, ಜಿಲ್ಲಾಧ್ಯಕ್ಷ ಹೆಚ್.ಎಸ್. ಬಾಲಾಜಿ, ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಧುಸೂದನ್, ಕಾಂಗ್ರೆಸ್ ಮುಖಂಡ ರಮೇಶ್ ಹೆಗಡೆ, ಎನ್. ರಮೇಶ್ ಮೊದಲಾದವರು ಭಾಗಿಯಾಗಿದ್ದರು.